ಬೆಂಗಳೂರು: ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ಮೊನ್ನೆ ನಡೆದಿದ್ದ ಅರ್ಚನಾ ರೆಡ್ಡಿ ಎಂಬ ಮಹಿಳೆಯ ಭೀಕರ ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣ ಕುರಿತು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಮಾಹಿತಿ ನೀಡಿದ್ದು ಅರ್ಚನಾ ರೆಡ್ಡಿ ಪುತ್ರಿ ಸೇರಿದಂತೆ 7 ಜನ ಆರೋಪಿಗಳನ್ನು ಅರೆಸ್ಟ್ ಮಾಡಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದೆ. ಜೊತೆಗೆ ಈ ಕೃತ್ಯಕ್ಕೆ ಬಳಸಲಾದ ವಾಹನಗಳು ಮತ್ತ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಿಸಿ ಟಿವಿ ಆಧಾರದ ಮೇಲೆ ಈ ಕೊಲೆ ಪ್ರಕರಣ ತನಿಖೆ ಕೈಗೊಳ್ಳಲಾಗಿತ್ತು, ತನಿಖೆಯಲ್ಲಿ ಮುಖ್ಯವಾದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಪೂರ್ಣ ಮಾಹಿತಿ ಬೆಳಕಿಗೆ ಬಂದಿದೆ.ಅಸಲಿಗೆ ಇದೆಲ್ಲದರ ಮಾಸ್ಟರ್ ಮೈಂಡ್ ಪತಿ ಹಾಗೂ ಮಗಳೇ ಆಗಿದ್ದಾರೆ ಎಂಬ ಅನುಮಾನವನ್ನು ಡಿಸಿಪಿ ಶ್ರೀನಾಥ್ ಜೋಶಿ ವ್ಯಕ್ತಪಡಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳಾದ, ನವೀನ್ ಕುಮಾರ್ ಮತ್ತು ಆತನ ಗೆಳೆಯರಾದ, ನರೇಂದ್ರ,ಹಾಗೂ ಸಂತೋಷ್, ಅನೂಪ್, ಆನಂದ್ ಯುವಿಕಾ ರೆಡ್ಡಿ( ಅರ್ಚನಾ ರೆಡ್ಡಿ ಮಗಳು),ದೀಪು ಎಂಬುವವರನ್ನ ಅರೆಸ್ಟ್ ಮಾಡಲಾಗಿದೆ.