ಮಂಗಳೂರು: ಇಂದು (ಡಿ.31)ರಂದು ರಾತ್ರಿ 7 ಗಂಟೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ.
ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್‌ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.