ಸವಣೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಡಿ.31 ರಂದು ನಡೆದಿದೆ.
ಕೊಳ್ತಿಗೆ ಗ್ರಾಮದ ಕೆಮ್ಮಾರ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಮ್ಚಿನಡ್ಕ ನಿವಾಸಿ ಅವಿನಾಶ್ (24) ಮೃತ ದುರ್ದೈವಿ.
ಪುತ್ತೂರು ಅಗ್ನಿಶಾಮಕ ದಳದ ಸಿಬಂದಿ ಮೃತ ದೇಹವನ್ನು ಕೆರೆಯಿಂದ ಮೇಲೆಕ್ಕೆತ್ತಿದ್ದು, ಬೆಳ್ಳಾರೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.


























