ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರೈತರಿಗೆ ಹೊಸ ವರ್ಷದ ಗಿಫ್ಟ್ ನೀಡಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿ ರೈತರಿಗೆ ಪ್ರಧಾನಿ ಮೋದಿ ಇಂದು 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.
ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 10 ಕಂತನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.
ಈ ಯೋಜನೆಯಡಿ ದೇಶಾದ್ಯಂತ ರೈತರು ವರ್ಷಕ್ಕೆ 6 ಸಾವಿರ ಪಡೆಯುತ್ತಾರೆ. ದೇಶದಲ್ಲಿನ 10 ಕೋಟಿಗೂ ಹೆಚ್ಚಿನ ರೈತರ ಕುಟುಂಬಗಳಿಗೆ ಸುಮಾರು 20 ಸಾವಿರ ಕೋಟಿ ರೂಪಾಯಿಯನ್ನು ಪ್ರಧಾನಿ ನೀಡಲಿದ್ದಾರೆ ಅಂತ ಮಾಹಿತಿ ಲಭ್ಯವಾಗಿದೆ.