ಗುಂಡ್ಯ: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಮುಂಜಾನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಮರವೊಂದು ಕಾರು ಹಾಗೂ ಚಾಲಕನ ಮೇಲೆಯೇ ಬಿದ್ದಿದೆ ಎನ್ನಲಾಗಿದೆ.
ಘಟನೆಯಿಂದಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದು, ಇವರೆಲ್ಲರೂ ಉಡುಪಿ ಮೂಲದವರಾಗಿದ್ದು ಬೆಂಗಳೂರಿಗೆ ತೆರಳುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.