ವಿಟ್ಲ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ.
ಸಂದೀಪ್ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ ಎನ್ನಲಾಗಿದೆ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಸಂದೀಪ್ ಬೆಳಿಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.