ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರಿನಲ್ಲಿ ಜ.9 ರಂದು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ನೆರವೇರಿಸಲಿದ್ದು, ಕಾರ್ಯಕ್ರಮವು ಕಲ್ಲಡ್ಕ ವಲಯ ಅಧ್ಯಕ್ಷರಾದ ಈಶ್ವರ ನಾಯ್ಕ ಮುರಬೈಲು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ಚನ್ನಪ್ಪಗೌಡ, ಬೊಳಂತಿಮೊಗರು ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಜೀವ ಎಚ್ ಭಾಗವಹಿಸಲಿದ್ದು, ದಿಕ್ಸೂಚಿ ಭಾಷಣವನ್ನು ಗೀತ ಸಾಹಿತ್ಯ ಸಂಭ್ರಮ ಖ್ಯಾತಿಯ ವಿಠಲ್ ನಾಯಕ್ ಹಾಗೂ ಬಂಟ್ವಾಳ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ದಿನೇಶ್ ಮಾಮೇಶ್ವರ ನೆರವೇರಿಸಲಿದ್ದಾರೆ.
ಮಾಮೇಶ್ವರ ಒಕ್ಕೂಟವು ಒಟ್ಟು 44 ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟವಾಗಿದ್ದು 330 ಸದಸ್ಯರನ್ನು ಒಳಗೊಂಡಿದೆ ಸಭಾ ಕಾರ್ಯಕ್ರಮದ ಬಳಿಕ ಒಕ್ಕೂಟದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿರುವುದು ಎಂದು ಮಾಮೇಶ್ವರ ಒಕ್ಕೂಟದ ಅಧ್ಯಕ್ಷರಾದ ಹರೀಶ್ ವಿ ಮಾಡ ಹಾಗೂ ಸೇವಾ ಪ್ರತಿನಿಧಿ ಯಶೋಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.