ಆಲಂಕಾರು: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್- ಬೈಕ್ ಗೆ ಡಿಕ್ಕಿಯೊಡೆದ ಘಟನೆ ಆಲಂಕಾರು ಸಮೀಪದ ನೆಕ್ಕರೆಯಲ್ಲಿ ನಡೆದಿದೆ.
ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ನೆಕ್ಕರೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಬೈಕಿನ ಮುಂಭಾಗದ ಚಕ್ರದ ಮೇಲೆ ಟಿಪ್ಪರ್ ಹರಿದಿದ್ದು, ಬೈಕ್ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಎಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶವಾಗಿಅಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.