ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಮತ್ತು ಸಮಿತಿ ಸದಸ್ಯರಿಂದ ಶ್ರೀ ದೇವರಿಗೆ ಶತರುದ್ರ ಸೇವೆ ನಡೆಯಿತು.
ಬೆಳಿಗ್ಗೆ ಸಂಕಲ್ಪದ ಬಳಿಕ ವಿಪ್ರರಿಂದ ಪಾರಾಯಣ ನಡೆಯಿತು. ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ ಉತ್ಸವದ ಬಳಿಕ ದೇವಳದ ಗೋಪುರದಲ್ಲಿ ಶತರುದ್ರ ಪ್ರಸಾದ ವಿತರಣೆ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿ.ಎಸ್ ಭಟ್ ಅವರು ಪ್ರಸಾದ ವಿತರಣೆ ಮಾಡಿದರು. ಸಮಿತಿ ಸದಸ್ಯರಾದ ಡಾ. ಸುಧಾ ಎಸ್ ರಾವ್, ರವೀಂದ್ರನಾಥ ರೈ ಬಳ್ಳಮಜಲು, ಬಿ.ಕೆ.ವೀಣಾ, ಐತ್ತಪ್ಪ ನಾಯ್ಕ, ರಾಮದಾಸ ಗೌಡ, ಶೇಖರ್ ನಾರಾವಿ, ರಾಮಚಂದ್ರ ಕಾಮತ್ ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.