ವಿಟ್ಲ: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಘಟನೆಯೊಂದು ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದ್ದು, ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿದ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದ್ದು, ಈ ದುಷ್ಕೃತ್ಯವೆಸಗಿದವರನ್ನು ಶೀಘ್ರ ಬಂಧಿಸದಿದ್ದಲ್ಲಿ ಠಾಣೆಗೆ ಮುತ್ತಿಗೆ ಹಾಕಲು ಕರೆ ನೀಡಿದ್ದಾರೆನ್ನಲಾಗಿದೆ.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡದ ಅಧ್ಯಕ್ಷರಾದ ಪದ್ಮನಾಭ ಕಟ್ಟೆ , ಸಂಚಾಲಕರಾದ ಚಂದ್ರಹಾಸ ಕನ್ಯಾನ ಹಾಗೂ ಮತ್ತಿತರ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.