ವಿಟ್ಲ: ತುಳುನಾಡಿನ ಕಾರ್ನಿಕದ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದ್ದು, ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ಬಂದ ವರನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ವಿಟ್ಲ ಠಾಣಾಧಿಕಾರಿಗೆ ದೂರು ಸಲ್ಲಿಸಲಾಯಿತು. ತಕ್ಷಣವೇ ವಿಟ್ಲ ಪೊಲೀಸರು ಉಮರುಳ್ಳ ಭಾಷಿತ್ ಮತ್ತು ಇತರರ ವಿರುದ್ದ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯದರ್ಶಿ ಚೇತನ್ ಕಡoಬು, ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯದರ್ಶಿ ಹರ್ಷ, ಹಿಂದೂ ಜಾಗರಣ ವಿಟ್ಲ ತಾಲೂಕು ಉಪಾಧ್ಯಕ್ಷ ರಾಜೇಶ್ ಕರೋಪಾಡಿ, ಯೋಗೀಶ್ ಅಳಿಕೆ, ಗಣೇಶ್ ಕಡoಬು, ಉಪಸ್ಥಿತರಿದ್ದರು.