ವಿಟ್ಲ: ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ವರ ಆಗಮಿಸಿದ ಘಟನೆಯ ವಿರುದ್ಧ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ವಿಟ್ಲ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
48 ಗಂಟೆಗಳೊಳಗೆ ದುಷ್ಕೃತ್ಯವೆಸಗಿದ ಆರೋಪಿಗಳನ್ನು ಬಂಧಿಸದಿದ್ದಲ್ಲಿ “ವಿಟ್ಲ ಬಂದ್” ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಿಂದೂಗಳ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ್ದನ್ನು ಖಂಡಿಸಿ ವಿಟ್ಲದಲ್ಲಿ ಪ್ರತಿಭಟನೆ ನಡೆದಿದ್ದು, ಶಾಂತಿಯುತವಾಗಿದ್ದ ವಿಟ್ಲದಲ್ಲಿ ಈ ಘಟನೆಯು ಶಾಂತಿಯನ್ನು ಕದಡುವ ಪ್ರಯತ್ನವಾಗಿದೆ. ಕೇವಲ ಹಿಂದೂಗಳು ಮಾತ್ರವಲ್ಲದೆ, ಮುಸ್ಲಿಂ ಬಾಂಧವರು ಕೂಡಾ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅರುಣ್ ವಿಟ್ಲ, ಮಾಜಿ ಸದಸ್ಯರಾದ ಶ್ರೀಕೃಷ್ಣ, ಮುರಳಿ ವಿಟ್ಲ, ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನರಸಿಂಹ ಶೆಟ್ಟಿ ಮಾಣಿ, ಹಿಂದು ಜಾಗರಣ ವೇದಿಕೆ ವಿಭಾಗ ಸಂಪರ್ಕ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂದೂ ಜಾಗರಣ ವೇದಿಕೆ ತಾಲೂಕ ಅಧ್ಯಕ್ಷರಾದ ಗಣೇಶ್ ಕಿರಿಲ ಪ್ರಧಾನ ಕಾರ್ಯದರ್ಶಿ ಅರುಣ್, ಸಜಿಪ ತಾಲೂಕು ಕಾರ್ಯದರ್ಶಿಗಳಾದ ಹರ್ಷ ವಿಟ್ಲ, ಚೇತನ್ ಕಡಂಬು,ಜಯರಾಮ ಆಚಾರ್ಯ, ನಾಗೇಶ್ ಭಂಡಾರಿ ಅನಂತಾಡಿ ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.