ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಬನ್ನೂರು ಗ್ರಾಮಾ ಪಂಚಾಯತ್‌ನ ಸಹಯೋಗದೊಂದಿಗೆ ಬನ್ನೂರಿನಲ್ಲಿ ಗ್ರಾಮ ಸಮೀಕ್ಷೆ ಕಾರ್ಯಕ್ರಮವು ನಡೆಯಿತು. ಪ್ರತಿ ಮನೆಗಳಿಗೆ ಭೇಟಿ ನೀಡಿ ಅಲ್ಲಿನ ನೀರಿನ ಉಪಲಭ್ಯತೆ, ಕೆರೆಬಾವಿಗಳ ನೀರಿನ ವ್ಯವಸ್ಥೆ, ನೀರು ಇಂಗುವ ಪ್ರಮಾಣದ ಬಗ್ಗೆ ಈ ಸಂದರ್ಭದಲ್ಲಿ ಮಾಹಿತಿಯನ್ನು ಕಲೆ ಹಾಕಲಾಯಿತು.
ಈ ಸಂದರ್ಭದಲ್ಲಿ ಬನ್ನೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಶ್ರೀಮತಿ ಜಯ, ಬನ್ನೂರು ಗ್ರಾಮ ವಿಕಾಸ ಸಮಿತಿಯ ಸಂಚಾಲಕ ರತ್ನಾಕರ ಪ್ರಭು ಕುಂಜೂರು, ಪಂಚಾಯತ್ ಸದಸ್ಯ ಶಿನಪ್ಪ ಕುಲಾಲ್, ವಿವೇಕಾನಂದ ಪದವಿಪೂರ್ವಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ,ಅಧ್ಯಾಪಕ ವೃಂದ, ವಿದ್ಯಾರ್ಥಿ ಸಮೂಹ ಹಾಗೂ ಗಣ್ಯರು ಉಪಸ್ಥಿತರಿದ್ದು ಗ್ರಾಮ ಸಮೀಕ್ಷೆಯನ್ನು ಕೈಗೊಳ್ಳಲಾಯಿತು.