ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತ ಆಕಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುವ ಪರೀಕ್ಷೆ ಗಳಿಗೆ ಅಗತ್ಯವಿರುವ ತರಬೇತಿ ನೀಡುವ ತರಗತಿಗಳನ್ನು ಪ್ರಾರಂಭಿಸಲಾಗಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 1 ಗಂಟೆಯಿಂದ ಸಾಯಂಕಾಲ 5ರ ವರೆಗೆ ಮತ್ತು ವಾರಾಂತ್ಯದ ತರಗತಿಗಳು ಭಾನುವಾರ ನಡೆಯಲಿವೆ.ಬಿಪಿಲ್ ಕಾರ್ಡುದಾರರಿಗೆ ,ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ,ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತದೆ . ಮೂರು ತಿಂಗಳ ತರಬೇತಿ ಇದಾಗಿದ್ದು ಉಚಿತ ಗ್ರಂಥಾಲಯ ವ್ಯವಸ್ಥೆ ಮತ್ತು ತರಬೇತಿಗೆ ಸಂಬಂಧಿಸಿದ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ .
ಪೊಲೀಸ್ ನೇಮಕಾತಿಗೆ ಸಂಬಂಧಿಸಿದಂತೆ ಅಗತ್ಯವಿರುವ ದೈಹಿಕ ಸಾಮರ್ಥ್ಯದ ಬಗ್ಗೆಯೂ ಕೂಡ ಸೂಕ್ತ ಮಾಹಿತಿ ಮತ್ತು ತರಬೇತಿಯನ್ನು ನೀಡಲಾಗುತ್ತದೆ. ಭಾರತೀಯ ಸೇನೆಯಲ್ಲಿ ಕರ್ತವ್ಯದಿಂದ ನಿವೃತ್ತಿ ಆಗಿರುವ ಹರಿಪ್ರಸಾದ್ ಮತ್ತು ಶೈಜು ಎಂಬವರು ವಿದ್ಯಾಮಾತ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಪರೀಕ್ಷಾ ತರಬೇತಿಯನ್ನು ಪಡೆಯುತ್ತಿದ್ದು ತರಗತಿಯನ್ನು ಅವರಿಂದಲೇ ಉದ್ಘಾಟಿಸಲಾಯಿತು.
ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.ಸದ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಹುದ್ದೆಗೆ ಅರ್ಜಿ ಸಲ್ಲಿಸಿರುವ ಮತ್ತು ಸದ್ಯ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಮುಂದೆ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಯೋಜನೆ ಹಾಕಿಕೊಂಡಿರುವ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ : ವಿದ್ಯಾಮಾತ ಅಕಾಡೆಮಿ ಫೋ.ನಂ : 8590773486 ಸಂಪರ್ಕಿಸಬಹುದಾಗಿದೆ.