ವಿಟ್ಲ: ಶಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಇನೋವಾ ಕಾರಿಗೆ ಹಾಗೂ ನಿಲ್ಲಿಸಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲಿನಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಶಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದು, ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಅಪಘಾತದಿಂದಾಗಿ ಶಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ವಿಫ್ಟ್ ಕಾರು ನಿಲ್ಲಿಸಿದ್ದ ಇನ್ನೋವಾ ಕಾರ್ ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಎರಡು ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರ್ ನ ಏರ್ ಬ್ಯಾಗ್ ಓಪನ್ ಆಗಿದ್ದು,ಆಕ್ಟಿವಾ, ಬೈಕ್ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.































