ಸಾಲೆತ್ತೂರು ಅಪಮಾನ ಪ್ರಕರಣ ನಡೆದ ಬೆನ್ನಲ್ಲೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಇನ್ನೊಂದು ಹಳೆಯ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ..
ವ್ಯಕ್ತಿಯೋರ್ವ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡು ಮೈ ಮೇಲೆ ದೈವ ಆವೇಶವಾದ ರೀತಿಯಲ್ಲಿ ವರ್ತಿಸುತ್ತಿರುವಂತಹ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವಿಡಿಯೋ ಹಳೆಯದ್ದಾಗಿದ್ದು, ಈಗ ಸಾಮಾಜಿಕ ಜಾತಾಣಗಳಲ್ಲಿ ಸದ್ದು ಮಾಡುತ್ತಿದೆ ಎನ್ನಲಾಗುತ್ತಿದೆ.
ದಿನದಿಂದ ದಿನಕ್ಕೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತಹ ಪ್ರಕರಣ ಹೆಚ್ಚಾಗುತ್ತಿದ್ದು, ಇಂತಹ ಘಟನೆಗಳಿಗೆ ಶೀಘ್ರ ಕೊನೆ ಕಾಣಿಸಬೇಕು ಎಂದು ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ ಬರುತ್ತಿದೆ..