ಪುತ್ತೂರು: ಕೆಮ್ಮಾಯಿ ಬಳಿ ದ್ವಿಚಕ್ರ ವಾಹನ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಡಿಕ್ಕಿ ಹೊಡೆದ ಘಟನೆ ಜ.8 ರಂದು ರಾತ್ರಿ ನಡೆದಿದೆ.
ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದದರಿಂದ ದಾರಂದಕುಕ್ಕು ನಿವಾಸಿ ರಂಜಿತ್ ಗಾಯಗೊಂಡಿದ್ದು ತಕ್ಷಣ ಸ್ಥಳೀಯ ಮುಸ್ಲಿಂ ಯುವಕರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ದ್ವಿಚಕ್ರ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.