ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಹಾಗೂ ಭಾನುವಾರ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕೇಸ್‌ನಲ್ಲಿ ಒಟ್ಟು 4.65 ಲಕ್ಷ ರೂಪಾಯಿ ದಂಡ ವಸೂಲಿಯಾಗಿದೆ.
ಭಾನುವಾರ ಒಟ್ಟು 534 ವಾಹನಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇದರ ವಿರುದ್ಧ ಭಾರತೀಯ ಮೋಟಾರು ಕಾಯ್ದೆಯಡಿ ಪ್ರಕರಣ ದಾಖಲಿಸಿ 1,75,400 ದಂಡ ಸಂಗ್ರಹಿಸಲಾಗಿದೆ. ಉಳಿದಂತೆ 240 ಮಾಸ್ಕ್ ಉಲ್ಲಂಘನೆ ಪ್ರಕರಣದಲ್ಲಿ 39,570 ರೂಪಾಯಿ ದಂಡ ಸಂಗ್ರಹಿಸಲಾಗಿದೆ.
ಶನಿವಾರದ ವೀಕೆಂಡ್ ಕರ್ಫ್ಯೂನಲ್ಲಿ 517 ವಾಹನಗಳ ಭಾರತೀಯ ಮೋಟಾರು ಕಾಯ್ದೆಯಡಿ ವಿರುದ್ಧ ಕೇಸ್ ದಾಖಲಿಸಿದ್ದು, 1,74,100 ರೂಪಾಯಿ ಸಂಗ್ರಹವಾಗಿದೆ. ಉಳಿದಂತೆ 110 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕಮಿಷನರೇಟ್ ವ್ಯಾಪ್ತಿಯಲ್ಲಿ 369 ಮಾಸ್ಕ್ ಉಲ್ಲಂಘನೆ ಪ್ರಕರಣದಲ್ಲಿ 76,800 ರೂಪಾಯಿ ದಂಡ ಸಂಗ್ರಹ ಮಾಡಲಾಗಿದೆ.
ಗ್ರಾಮಾಂತರ ವ್ಯಾಪ್ತಿಯಲ್ಲಿ 10 ವಾಹನಗಳನ್ನು ವಶಪಡಿಸಿಕೊಂಡಿದ್ದು, 108 ಮಾಸ್ಕ್ ಉಲ್ಲಂಘನೆ ನಡೆದ ಪ್ರಕರಣ ನಡೆದಿದೆ. ಶನಿವಾರ ಪಾಲಿಕೆಯ ಆರೋಗ್ಯ ಮತ್ತು ಕಂದಾಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ಒಟ್ಟು 34 ಪ್ರಕರಣಗಳಿಗೆ ರೂ. 12,400 ದಂಡ ವಿಧಿಸಲಾಗಿದೆ. ಹಾಗು ಎರಡು ಉದ್ಧಿಮೆ ಪರವಾನಿಗೆ ರದ್ದು ಪಡಿಸಲಾಗಿದೆ ಎಂದು ತಿಳಿದು ಬಂದಿದೆ.