ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ನಳೀನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.