ವಿಟ್ಲ: ಸ್ವಾಮಿ ಕೊರಗಜ್ಜನ ನಿಂದನೆ, ಅಪಹಾಸ್ಯ, ನಿರಂತರ ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವುದು, ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೈವದೇವರನ್ನು ಅಶ್ಲೀಲವಾಗಿ ಚಿತ್ರಿಸಿ ಅವಮಾನಗೊಳಿಸುವುದರ ವಿರುದ್ಧ ಜ.11 ರಂದು ಸಾಮೂಹಿಕ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷದ್ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ನಾಳೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ಧನುಪೂಜೆಯ ನಂತರ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಎಲ್ಲಾ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಶ್ವ ಹಿಂದೂ ಪರಿಷದ್ ವಿಟ್ಲ ಪ್ರಖಂಡದ ಅಧ್ಯಕ್ಷರಾದ ಪದ್ಮನಾಭ ಕಟ್ಟೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.