ಬಂಟ್ವಾಳ: ಅಪರಿಚಿತ ವ್ಯಕ್ತಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ವ್ಯಕ್ತಿಯೋರ್ವ ಏಕಾಏಕಿ ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನ ಅಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವ್ಯಕ್ತಿಯ ಮುಂಡ ರುಂಡ ಬೇರ್ಪಟ್ಟಿದ್ದು ಮೃತ ವ್ಯಕ್ತಿಯ ಬಗ್ಗೆ ಇನ್ನಷ್ಟೆ ವಿವರ ಲಭ್ಯವಾಗಬೇಕಿದೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.