ಪುತ್ತೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ ಕಂಡಿಸಿ ಹಾಗೂ ಇಂದಿರಾ ಕ್ಯಾಂಟೀನ್ ನೌಕರರಿಗೆ ವೇತನ ನೀಡದಿರುವ ವಿರುದ್ಧ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾ.01 ರಂದು ಬೆಳಗ್ಗೆ 10.30 ಕ್ಕೆ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ತಂಗುದಾಣ ಬಳಿಯ ಗಾಂಧಿ ಕಟ್ಟೆಯ ಮುಂಬಾಗ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.