ದೇಶದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ಇಂದು ಸಂಜೆ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಸಭೆ ನಡೆಸಲಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಫೆಬ್ರವರಿಯಲ್ಲಿ ಗರಿಷ್ಠ ಪ್ರಮಾಣಕ್ಕೆ ಸೋಂಕು ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ನಡೆಸುತ್ತಿರುವ ಸಭೆ ಮಹತ್ವ ಪಡೆದುಕೊಂಡಿದೆ.
ದೇಶದ ಆಸ್ಪತ್ರೆಗಳ ಸ್ಥಿತಿಗತಿ, ಕೋವಿಡ್ ಆಸ್ಪತ್ರೆಗಳ ಪುನರಾರಂಭ, ಐಸಿಯು, ಆಕ್ಸಿಜನ್ ಬೆಡ್, ಆಕ್ಸಿಜನ್ ಲಭ್ಯತೆ, ಔಷಧಗಳ ಲಭ್ಯತೆ, ಮಕ್ಕಳಿಗಾಗಿ ತಯಾರಿ, ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.