ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಸಂಚಾರ ನಿಯಂತ್ರಣಾಧಿಕಾರಿಯೊಬ್ಬರಿಗೆ ಕೇರಳ ಮೂಲದ ವ್ಯಕ್ತಿಯೊಬ್ಬರು ಹಲ್ಲೆಗೈದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಎನ್ನಲಾಗಿದೆ.
ಅವರ ಕೇರಳ ಮೂಲದ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.