ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ ಸಿಟಿ, ಮತ್ತು ಪೊಲೀಸ್ ಠಾಣೆ ವಿಟ್ಲ, ಇದರ ಸಹಭಾಗಿತ್ವದಲ್ಲಿ ಯುವಜನತೆ ಮತ್ತು ಕಾನೂನು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಪ್ರಾಂಶುಪಾಲರಾದ ಅಧ್ಯಕ್ಷತೆಯನ್ನು ಡಾ. ಶ್ರೀಜಾ ವಹಿಸಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ್ ಎಚ್.ಇ. ಭಾಗವಹಿಸಿ ಯುವಜನತೆ ಮತ್ತು ಕಾನೂನಿನ ಬಗ್ಗೆ ಬಹಳ ಸುದೀರ್ಘವಾದ ಮಾಹಿತಿಯನ್ನು ಮನದಟ್ಟಾಗುವ ರೀತಿಯಲ್ಲಿ ನೀಡಿ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪ್ರಶಂಸೆಗೆ ಪಾತ್ರರಾದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ. ಸಂದೇಶ್ ಶೆಟ್ಟಿ, ಲಯನ್ಸ್ ಜಿಲ್ಲಾಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್, ವಿಟ್ಲ ಠಾಣಾ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಕಾರ್ಯಕ್ರಮದ ಕೋಆರ್ಡಿನೇಟರ್ ಪ್ರೊಫೆಸರ್ ಪರಮೇಶ್ವರಿ, ಪ್ರೊಫೆಸರ್ ಸೌಮ್ಯ, ಪ್ರೊಫೆಸರ್ ಜ್ಯೋತಿ, ಪ್ರೊಫೆಸರ್ ಜ್ಯೋತಿ ಪಿಎಸ್, ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಸದಸ್ಯರು, ಪೊಲೀಸ್ ಸಿಬ್ಬಂದಿಗಳು, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಕಾಲೇಜ್ ವಿದ್ಯಾರ್ಥಿನಿ ಹರ್ಷಿತಾ ಸ್ವಾಗತಿಸಿ, ವಿದ್ಯಾರ್ಥಿನಿ ಆಶಾಲತಾ ವಂದಿಸಿ, ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮವನ್ನು ನಿರೂಪಿಸಿದರು.