ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟ್ರಾನ್ಸ್ಪರ್ ಕಂಬಕ್ಕೆ ಡಿಕ್ಕಿಯಾದ ಘಟನೆ ತೆಂಕಿಲದಲ್ಲಿ ನಡೆದಿದೆ.
ಕಾರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಿಂದಾಗಿ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಟ್ರಾನ್ಸ್ಪರ್ ಕಂಬ ತುಂಡಾಗಿದ್ದು, ಕಾರು ಜಖಂಗೊಂಡಿದೆ. ಇನ್ನು ಯುವಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.