ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಸಹಯೋಗದಲ್ಲಿ ಜನಜಾಗೃತಿಗಾಗಿ ಪೊಲೀಸ್ ಸೇವೆಯಲ್ಲಿ ಹೊಸದಾಗಿ ರೂಪುಗೊಂಡ 112 ಸೇವೆಯ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿಯನ್ನು ನೀಡುವ ಕರಪತ್ರವನ್ನು ವಿತರಿಸುವ ಕಾರ್ಯಕ್ರಮಕ್ಕೆ ವಿಟ್ಲ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ್ ಎಚ್ ಇ. ರವರು ವಿಟ್ಲ ಸರಕಾರಿ ಪದವಿ ಕಾಲೇಜಿನಲ್ಲಿ ಕರಪತ್ರವನ್ನು ನೀಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀಜಾ, ಲಯನ್ಸ್ ಜಿಲ್ಲಾ ಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಅಧ್ಯಕ್ಷರಾದ ಬಿ ಸಂದೇಶ್ ಶೆಟ್ಟಿ ಹಾಗೂ ಕಾಲೇಜಿನ ಶಿಕ್ಷಕ ವೃಂದ, ಕಾಲೇಜಿನ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.