ಮಂಗಳೂರು: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಟ್ವೀಟ್ ಮಾಡಿದ್ದು, “ಗಣರಾಜ್ಯೋತ್ಸವದ ದಿನದಂದು ದೆಹಲಿಯ ರಾಜಪಥದಲ್ಲಿ ಚಲಿಸುವ ಟ್ಯಾಬ್ಲೋಗಳಿಗೆ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಆದರೆ, ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ” ಎಂದು ಟ್ವೀಟ್ ಮಾಡಿದ್ದಾರೆ.
“ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.
ನಾರಾಯಣ ಗುರುಗಳ ಟ್ಯಾಬ್ಲೊ ವಿರೋಧಿಸಿರುವ ಹಿನ್ನೆಲೆಯಲ್ಲಿ ಬಿಲ್ಲವ ಸಮುದಾಯ ಆಕ್ರೋಶಗೊಂಡಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.
ಪ್ರಜಾಪ್ರಭುತ್ವ ದಿನದಂದು ದೆಹಲಿಯ ರಾಜಪಥದಲ್ಲಿ ಚಲಿಸುವ ಟ್ಯಾಬ್ಲೋಗಳಿಗೆ ಕೆಲವು ಮಾರ್ಗದರ್ಶಿ ಸೂತ್ರಗಳಿವೆ.
— Nalinkumar Kateel (@nalinkateel) January 17, 2022
ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ.
ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ.