ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯ ಬಿಳಿಯೂರು ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಗೆ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಪುತ್ತೂರು ತಾಲೂಕು ಕೃಷ್ಣ ನಗರ ಚಿಕ್ಕಮುಡ್ನೂರು ಬಡವು ನಿವಾಸಿ ವಿನಯ ಕುಮಾರ್ (31), ಪುತ್ತೂರು ತಾಲೂಕು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ಮಹಮ್ಮದ್ ಜುನೈದ್(24) ರನ್ನು ಬಂಧಿಸಲಾಗಿತ್ತು.
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ನೇಂಜ ನಿವಾಸಿ ವಸಂತ ದೇವಾಡಿಗ (44) ಎಂಬವರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಯಾರೋ ಕಳ್ಳರು ಜ.11 ರಂದು ರಾತ್ರಿ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕಳ್ಳತನ ಪ್ರಕರಣ ದಾಖಲಾಗಿತ್ತು.
ಜುನೈದ್ ಪರ ವಕೀಲರಾದ ಮಹೇಶ್ ಕಜೆ ಮತ್ತು ವಿನಯ್ ಪರ ಚಿನ್ಮಯ್ ರೈ ವಾದಿಸಿದರು.