ಮೂಡುಬಿದಿರೆ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಗಂಟಲ್ ಕಟ್ಟೆಯಲ್ಲಿ ನಡೆದಿದೆ.
ಬಡಗುತಿಟ್ಟಿನ ಹಿರಿಯಡ್ಕ ಯಕ್ಷಗಾನ ಮೇಳದಲ್ಲಿ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದ ಖ್ಯಾತ ಯಕ್ಷಗಾನ ಕಲಾವಿದ ವಾಮನ ಕುಮಾರ್ (47) ಎಂಬವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಬುಧವಾರದ ಆಟ ಮುಗಿಸಿ ಬೈಕಿನಲ್ಲಿ ಬರುತ್ತಿದ್ದ ಅವರಿಗೆ ಮಾರುತಿ ಓಮ್ನಿಯೊಂದು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ವಾಮನ ಕುಮಾರ್ ರವರು ಸುಮಾರು 30 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾವಿದರಾಗಿದ್ದು, ಇತ್ತೀಚೆಗೆ ಹಿರಿಯಡ್ಕ ಮೇಳದ ವ್ಯವಸ್ಥಾಪಕರಾಗಿ ಮೇಳವನ್ನು ಮುನ್ನಡೆಸುತ್ತಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಯಕ್ಷಗಾನ ಅಭಿಮಾನಿಗಳನ್ನು ಅಗಲಿದ್ದಾರೆ.