ವಿಟ್ಲ: ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಬಂಟ್ವಾಳದ ನೇತ್ರಾವತಿ ಸೇತುವೆಯಿಂದ ಹಾರಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಡೆದಿದ್ದು, ಈ ಘಟನೆಯನ್ನು ಖಂಡಿಸಿ ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಕೆಲಸ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದರು. ಇದೀಗ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿಯವರಿಗೆ ಮನವಿ ಸಲ್ಲಿಸಿ ಕೆಲಸ ಆರಂಭಿಸಿದ್ದಾರೆ.


























