ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊರೊನಾ ರೂಲ್ಸ್ ಸಂಬಂಧ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಜನವರಿ 31ರವರೆಗೂ ನೈಟ್ ಕರ್ಫ್ಯೂ ಮುಂದುವರಿಸೋಣ. ವೀಕೆಂಡ್ ಕರ್ಫ್ಯೂ ಮಾಡುವುದರಿಂದ ಕೆಲವರಿಗೆ ಸಂಕಷ್ಟವಾಗಬಹುದು. ಎಲ್ಲದಕ್ಕೂ ಕಠಿಣ ನಿಯಮ ಜಾರಿ ಮಾಡೋಣ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ ಎನ್ನಲಾಗಿದೆ. ಅದರಂತೆ ಕಠಿಣ ನಿಯಮ ಜಾರಿಗೆ ತಂದು, ವೀಕೆಂಡ್ ಕರ್ಫ್ಯೂ ರದ್ದು ಮಾಡುವ ನಿರ್ಧಾರಕ್ಕೆ ಸರ್ಕಾರ ಮುಂದಾಗಿದೆ.