ಸುಳ್ಯ: ಪೆರಜ ಶ್ರೀ ವನಶಾಸ್ತಾರ ದೇವಸ್ಥಾನದಲ್ಲಿ ನವೀಕರಣ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ.22-24 ರವರೆಗೆ ನಡೆಯಲಿದೆ.
ಜ.22 ರಂದು ಬೆಳಿಗ್ಗೆ ದೇವಸ್ಥಾನದ ಉಗ್ರಾಣ ತುಂಬಿಸುವ ಕಾರ್ಯವೇರಿತು. ಸಂಜೆ ತಂತ್ರಿಗಳ ಆಗಮನದ ನಂತರ, ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಪ್ರಸಾದ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ವಾಸ್ತು ಪುಣ್ಯಾಹ ನಡೆಯಲಿದೆ.
ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ.