ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಶಾಲಾ ಮೈದಾನದಲ್ಲಿ ನಡೆದಿದೆ.
ಪಿಕಪ್ ವಾಹನದಲ್ಲಿ ದನವೊಂದನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ಹಾಕಲಾಗಿತ್ತು.
ದನವನ್ನು ವಧೆ ಮಾಡಲು ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಸ್ಥಳೀಯರದ್ದಾಗಿತ್ತು. ಖಚಿತ ಮಾಹಿತಿ ಮೇಲೆ ಗ್ರಾಮಾಂತರ ಎಸ್ ಐ ಹರೀಶ್ ನೇತೃತ್ವದ ತಂಡ ದಾಳಿ ನಡೆಸಿದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಗ್ರಾಮಾಂತರ ಎಸ್ ಐ ಹರೀಶ್ ನೇತೃತ್ವದ ತಂಡ ವಾಹನ ಸಹಿತ ದನವನ್ನು ವಶಕ್ಕೆ ಪಡೆದಿದೆ.