ಮೂಡುಬಿದಿರೆ: ಪಾದಾಚಾರಿಯೋರ್ವರು ಹೋಗುತ್ತಿದ್ದ ವೇಳೆ ರಿಡ್ಸ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ಕಲ್ಲಮುಂಡ್ಕೂರು ಪೇಟೆಯಲ್ಲಿ ನಡೆದಿದೆ.
ಮೃತರನ್ನು ಸಂಪಿಗೆಯ ಇಡ್ಡಬೆಟ್ಟು ನಿವಾಸಿ ಹರೀಶ್(53) ಎನ್ನಲಾಗಿದೆ.
ಹರೀಶ್ ರವರು ಎಂದಿನಂತೆ ಸಂಜೆ ವೇಳೆ ಸಂಪಿಗೆಯಿಂದ ಕಲ್ಲಮುಂಡ್ಕೂರು ಪೇಟೆಗೆ ಹೋಗಿದ್ದು, ನಂತರ ಹಿಂತಿರುಗಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ರಿಟ್ಸ್ ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭ ನೆಲಕ್ಕೆ ಬಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಡಿಕ್ಕಿ ಹೊಡೆದ ಕಾರು ಪರಾರಿಯಾಗಿದ್ದು, ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕ ಸುದೀಪ್ ರವರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.