ಪುತ್ತೂರು: ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ , ಕೇರಳ ಸರಕಾರ ಸಿದ್ಧಗೊಳಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ತಿರಸ್ಕರಿಸಿ, ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಿ, ಹಿಂದುಳಿದ ವರ್ಗಗಳನ್ನು ಅವಮಾನಿಸಿದೆ ಎಂದು ಕೇಂದ್ರ ಬಿ.ಜೆ.ಪಿ. ಸರಕಾರದ ವಿರುದ್ಧ ಮಹಾನ್ ಮಾನವತಾವಾದಿ, ದಾರ್ಶನಿಕ, ಬ್ರಹ್ಮಶ್ರೀ ನಾರಾಯಣ ಗುರುಗಳ ಗೌರವಾರ್ಥ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮತ್ತು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಹಭಾಗಿತ್ವದಲ್ಲಿ ಜ.26 ರಂದು ಪುತ್ತೂರಿನ ಗಾಂಧೀ ಕಟ್ಟೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದವರೆಗೆ ‘ಪ್ರತಿಭಟನಾ ಪಥಸಂಚಲನ’ ನಡೆಯಲಿದೆ.
ಈ ಐತಿಹಾಸಿಕ ಪಥಸಂಚಲನದಲ್ಲಿ ಭಾಗವಹಿಸಿ, ಮೋದಿ ನೇತೃತ್ವದ ಕೇಂದ್ರ ಬಿ.ಜೆ.ಪಿ. ಸರಕಾರದ ನೀತಿಯನ್ನು ಖಂಡಿಸಿ, ಗುರುಗಳ ಘನತೆ ಗೌರವಗಳನ್ನು ಎತ್ತಿ ಹಿಡಿದು, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.