ಪುತ್ತೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಕುಂಬ್ರ ಇದರ ನೂತನ ಕಚೇರಿಯು ಸ್ಥಳಾಂತರಗೊಂಡು ಅಕ್ಷಯ ಆರ್ಕೇಡ್ ನಲ್ಲಿ ಜ.24 ರಂದು ಶುಭಾರಂಭಗೊಂಡಿತು.
ನೂತನ ಕಚೇರಿಯನ್ನು ರಿಬ್ಬನ್ ಕಟ್ ಮಾಡುವ ಮೂಲಕ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಉದ್ಘಾಟಿಸಿದರು.
ಸಭಾ ಕಾರ್ಯಕ್ರಮವನ್ನು ಅಕ್ಷಯ ಗ್ರೂಪ್ಸ್ ನ ಜಯಂತ ನಡುಬೈಲು ರವರು ಉದ್ಘಾಟಿಸಿದರು. ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಆರ್.ಸಿ. ನಾರಾಯಣ ರೆಂಜ,ಮಾಜಿ ಶಾಸಕಿ ಶಂಕುತಳಾ ಶೆಟ್ಟಿ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿರುವ ಸುಕನ್ಯಾ, ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ರೈ ಕುಂಬ್ರ, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತ್ರಿವೇಣಿ ಪಲ್ಲತ್ತಾರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.