ಸುಳ್ಯ: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ಮಗನನ್ನೇ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ಸುಳ್ಯದ ಆಲೆಟ್ಟಿ ಎಂಬಲ್ಲಿ ನಡೆದಿದೆ.
ಜಯಪ್ರಕಾಶ್ ಹಲ್ಲೆಗೊಳಗಾದ ಮಗ. ರಾಮಣ್ಣ ನಾಯ್ಕ ಹಲ್ಲೆ ನಡೆಸಿದ ತಂದೆ.
ಅಪ್ಪ-ಮಗ ಇಬ್ಬರೂ ಕುಡಿದು ಪರಸ್ಪರ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಸಿಟ್ಟಿಗೆದ್ದ ಅಪ್ಪ ಮನೆಯಲ್ಲಿದ್ದ ಕತ್ತಿಯಿಂದ ಮಗನ ಎದೆಗೆ ಇರಿದಿದ್ದಾರೆ ಎನ್ನಲಾಗಿದೆ.
ಸದ್ಯ ಗಾಯಗೊಂಡ ಮಗನನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.