ವಿಟ್ಲ: ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನ ಮೇಗಿನಪೇಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆ ಜ.26 ಹಾಗೂ 27 ರಂದು ನಡೆಯಲಿದೆ.
ವೇದಮೂರ್ತಿ ಕುಂಟುಕುಡೇಲು ಕೆ. ರಘುರಾಮ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ನೆರವೇರಲಿದೆ.
ಜ.26 ರಂದು ಹೊರಕಾಣಿಕೆ ಸಮರ್ಪಣೆ( ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿಂದ ಬೃಹತ್ ಮೆರವಣಿಗೆಯೊಂದಿಗೆ ಮಹಮ್ಮಾಯಿ ಸನ್ನಿಧಿಗೆ), ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ ಪಂಚಕವ್ಯಾದಿ ಸ್ಥಳಶುದ್ಧಿ, ವಾಸ್ತು ಹೋಮ, ವಾಸ್ತು ಬಲಿ ಹಾಗೂ ಇತರ ಧಾರ್ಮಿಕ ಕಾರ್ಯಗಳು ನಡೆಯಲಿದೆ.
ಜ.27 ಬೆಳಗ್ಗೆ ಗಣಪತಿ ಹೋಮ, ಪ್ರಾಯಶ್ಚಿತ್ತ ಹೋಮ ಪ್ರಾಯಶ್ಚಿತ ಹೋಮ, ಬ್ರಹ್ಮ ಕಲಶಪೂಜೆ, ಆಶ್ಲೇಷಾ ಬಲಿ, ವಟು ಆರಾಧನೆ, ಬೆಳಗ್ಗೆ 10.8 ರ ಮೀನಾ ಲಗ್ನದಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಮತ್ತು ಸ-ಪರಿವಾರ ದೈವಗಳ ಪುನಃ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಬಳಿಕ ಚಂಡಿಕಾಯಾಗ, ಪೂರ್ಣಹುತಿ, ಪ್ರಸಾದ ವಿತರಣೆ ನಡೆಯಲಿದೆ.