ದೇಶದಲ್ಲಿಂದು 73 ನೇ ಗಣರಾಜ್ಯೋತ್ಸವ ಸಂಭ್ರಮಿಸಲಾಗುತ್ತಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಟಿ.ಆರ್. ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣ ಬಳಿಕ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದು, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತಿದ್ದೇನೆ. 2021-22 ರಲ್ಲಿ ಜಗತ್ತು ಕೊರೋನಾ ಸವಾಲನ್ನು ನಿಭಾಯಿಸಲು ಕಷ್ಟಪಡುತ್ತಿರುವಾಗ ನಾವು ಈ ಹೋರಾಟವನ್ನು ಸಮರ್ಥವಾಗಿ ಹೋರಾಡಿದ್ದೇವೆ. ನವ ಚೈತನ್ಯ ಹಾಗೂ ಆಶೋತ್ತರಗಳೊಂದಿಗೆ 2022ಕ್ಕೆ ಹೆಜ್ಜೆ ಇರಿಸಿದ್ದೇವೆ. ಎಲ್ಲರ ಸಹಕಾರದಿಂದ ಕೊರೋನಾ ತಗ್ಗಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದರು.