ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ.
ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್ ಬಿಡುಗಡೆಗೊಂಡಿದ್ದು, ಅಶ್ವಿನಿ ಪುನೀತ್ ರಾಜ್‍ಕುಮಾರ್, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಪೋಸ್ಟರ್‌ನಲ್ಲಿ ಪುನೀತ್ ಗನ್ ಹಿಡಿದು ಖಡಕ್ ಆರ್ಮಿ ಆಫೀಸರ್ ಆಗಿ ಮಿಂಚಿದ್ದಾರೆ. ಅದರಲ್ಲಿಯೂ ಪೋಸ್ಟರ್‌ನಲ್ಲಿರುವ “ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್” ಎಂಬ ಸಾಲುಗಳು ಎಲ್ಲರ ಗಮನ ಸೆಳೆಯುತ್ತಿದೆ.
ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಆ್ಯಕ್ಷನ್ ಕಮರ್ಷಿಯಲ್ ಜೇಮ್ಸ್ ಸಿನಿಮಾವಾಗಿದ್ದು, ಚಿತ್ರದ ಶೂಟಿಂಗ್ ಇದೀಗ ಕಂಪ್ಲೀಟ್ ಆಗಿದೆ. ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು ಗ್ರಾಫಿಕ್ಸ್ ಮಾಡಲಾಗಿದೆ.
ಅಪ್ಪು ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ರಾಜಕುಮಾರ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಆನಂದ್ ಅವರೇ ಜೇಮ್ಸ್ ಚಿತ್ರದಲ್ಲಿ ಅಪ್ಪು ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಚಿತ್ರದಲ್ಲಿ ಶ್ರೀಕಾಂತ್, ಆದಿತ್ಯ ಮೆನನ್ ಹಾಗೂ ಅನು ಪ್ರಭಾಕರ್, ಮುಖೇಶ್ ರಿಷಿ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ. ಪುನೀತ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಆಗಿದ್ದು, ಈಗಾಗಲೇ ಪ್ರೇಕ್ಷಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಿದ್ದು, ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.
"ಸಲಾಂ ಸೋಲ್ಜರ್ ದೇಶಕ್ಕೆ ನೀನೆ ಪವರ್"
— PRK Audio Official (@PRKAudio) January 26, 2022
ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
Wish you all a "Happy Republic Day".@PriyaAnand #KishorePathikonda @BahaddurChethan @actorsrikanth @realsarathkumar @charanrajmr2701 #BoloBoloJames #PowerInU pic.twitter.com/kxBiBN7biH