ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕೇಪು ಗ್ರಾಮದ ಅಮೈ ನಿವಾಸಿ ಮಹಾಲಿಂಗ ನಾಯ್ಕ್ ರವರ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ ಭೇಟಿ ನೀಡಿ, ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ರವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆರ್ ಸಿ ನಾರಾಯಣ, ರಾಜೀವ್ ಭಂಡಾರಿ, ಹರಿಪ್ರಸಾದ್ ಯಾದವ್, ದಯಾನಂದ ಶೆಟ್ಟಿ ಉಜಿರೆಮಾರ್, ಜಗಜ್ಜೀವನ್ ರಾಮ್ ಶೆಟ್ಟಿ, ರವೀಶ್ ಶೆಟ್ಟಿ ಕರ್ಕಳ, ಪುರುಷೋತ್ತಮ ಗೌಡ ಕಲ್ಲಂಗಳ, ರಾಜೇಶ್ ಕರವೀರ, ತಾರಾನಾಥ ಆಳ್ವ, ರಾಘವ, ಜಯಶ್ರೀ ಕೊಡಂದೂರು, ಯಶಸ್ವಿನಿ ಶಾಸ್ತ್ರೀ ಹಾಗೂ ಮತ್ತಿತರರು ಉಪಸ್ಥಿತರಿದ್ದರು.