ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ.
ಸಾತಗಳ್ಳಿ ಲೇಔಟ್ ನ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳು ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಸಾಲಕ್ಕೆ ಹೆದರಿ ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಉದಯಗಿರಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.