ಬೆಂಗಳೂರು: ಗಟ್ಟಿಮೇಳ ಧಾರವಾಹಿ ನಾಯಕ ನಟ ರಕ್ಷಿತ್ ಹಾಗೂ ಅವರ ಗ್ಯಾಂಗ್ ನಗರದ ಜಿಂಜರ್ ಲೇಕ್ ವ್ಯೂ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದೆ ಅನ್ನೋ ಆರೋಪ ಕೇಳಿಬಂದಿದೆ.
ಶೂಟಿಂಗ್ ಮುಗಿದ ಮೇಲೆ ಹೋಟೆಲ್‌ನಲ್ಲಿ ಪಾರ್ಟಿ ಮಾಡಿ ಗಲಾಟೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ.
ನಟರಾದ ರಕ್ಷಿತ್, ಅಭಿಷೇಕ್, ರಂಜನ್, ಅನುಷಾ, ಶರಣ್ಯ ಸೇರಿ ಒಟ್ಟು ಮಂದಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ವಿಧಿಸಿದೆ. ಹೀಗಿದ್ದೂ ರಕ್ಷಿತ್ ಗ್ಯಾಂಗ್ ಕೊರೊನಾ ನಿಯಮವನ್ನ ಗಾಳಿಗೆ ತೂರಿ ಗಲಾಟೆ ಮಾಡಿದೆ ಅನ್ನೋ ಆರೋಪ ಕೇಳಿ ಬಂದಿದೆ.
7 ಮಂದಿ ವಿರುದ್ಧ ಎಫ್‌ಐಆರ್:
ಗಲಾಟೆ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆಯ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ತಿಳಿ ಹೇಳುವ ಪ್ರಯತ್ನ ಮಾಡಿದ್ರು ಎನ್ನಲಾಗಿದೆ. ಆದರೆ ರಕ್ಷಿತ್ ಟೀಂ, ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದೆ. ಇನ್ನು ಸ್ಥಳೀಯರು ನೀಡಿದ ದೂರಿನ ಪ್ರಕಾರ, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. 7 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.