ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮೂಡಬಿದ್ರೆಯ ಮಹಾವೀರ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹೃತಿಕ್ ಕೆ ಎಂ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಈತನು ಸುಳ್ಯ ತಾಲೂಕು ಕನಕಮಜಲು ಗ್ರಾಮದ ಮೂರ್ಜೆ ಹರೀಶ ಕೆ.ಎಂ ಮತ್ತು ವಿಶಾಲಕ್ಷಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.