ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಇದರ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ಜ.30 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಗುರು ಮಠ, ಶ್ರೀ ರೇಣುಕಾ ಪೀಠದ ಆರ್ಯ ಈಡಿಗ ಮಹಾಸಂಸ್ಥಾನದ ನಿಯೋಜಿತ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಎಚ್. ಎಸ್. ಸಾಯಿರಾಂ ರವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಯುವವಾಹಿನಿಯ ಡಾ. ರಾಜಾರಾಮ್ ಕೆ.ಬಿ. ರವರು ವಹಿಸಲಿದ್ದಾರೆ.
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರ ಕೆ.ಎಸ್.ಪಿ.ಎಸ್. ರವರು ಯುವಸಿಂಚನ ವಿಶೇಷಾಂಕವನ್ನು ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ ಪದನ್ನೋತಿ ಹಿರಿಯ ವಕೀಲರಾದ ತಾರಾನಾಥ್ ಪೂಜಾರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್, ಚಲನಚಿತ್ರ ನಟರಾದ ಭೋಜರಾಜ್ ವಾಮಂಜೂರು, ಅಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ ರವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.