ಬೆಂಗಳೂರು: ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ರವಿ ಚೆನ್ನಣ್ಣವರ್ ಅವರ ವರ್ಗಾವಣೆಗೆ ಸರಕಾರ ತಡೆ ಹಿಡಿದಿದೆ.
ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಆದೇಶಕ್ಕೆ ತಡೆ ಹಿಡಿದಿದೆ.
ರವಿ ಚೆನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಂಚನೆ ದೂರು ನೀಡಿದ್ದರು.ಇದು ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.