ಪುತ್ತೂರು: ಆಟೋ ರಿಕ್ಷಾ ಮತ್ತು ಜೀಪ್ ಮಧ್ಯೆ ಡಿಕ್ಕಿ ನಡೆದ ಘಟನೆ ಇಂದು ಬೆಳಗ್ಗೆ ಮಾಡಾವು ಕೆಯ್ಯೂರು ನೆಟ್ಟಳ ರಸ್ತೆಯಲ್ಲಿ ನಡೆದಿದ್ದು, ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಓರ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಪ್ರವೀಣ್ ದೇರ್ಲ(32) ಎನ್ನಲಾಗಿದೆ.
ಆಟೋ ರಿಕ್ಷಾ ಮತ್ತು ಜೀಪ್ ಮಧ್ಯೆ ಡಿಕ್ಕಿಯಾಗಿದ್ದು, ರಿಕ್ಷಾ ಚಾಲಕ ಸೇರಿದಂತೆ ರಿಕ್ಷಾದಲ್ಲಿದ್ದ 5 ಜನರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿತ್ತು.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಕೊನೆಯುಸಿರೆಳೆದಿದ್ದಾರೆ.
ಮೃತರು ತಂದೆ, ತಾಯಿ, ಸಹೋದರರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.





























