ಪುತ್ತೂರು: ಕಾರು ಮತ್ತು ಕಂಟೈನರ್ ನಡುವೆ ಅಪಘಾತ ಸಂಭವಿಸಿದ ಘಟನೆ ಜ.30 ರಂದು ಪೋಳ್ಯದಲ್ಲಿ ನಡೆದಿದೆ.
ಪುತ್ತೂರು ಕಡೆ ಬರುತ್ತಿದ್ದ ಕಾರು ಮತ್ತು ಮಂಗಳೂರು ಕಡೆ ತೆರಳುತ್ತಿದ್ದ ಕಂಟೈನರ್ ನಡುವೆ ಪೋಳ್ಯ ಸಮೀಪ ಅಪಘಾತ ಸಂಭವಿಸಿದೆ.
ಅಪಘಾತದಿಂದಾಗಿ ಕಂಟೈನರ್ ಲಾರಿಯು ರಸ್ತೆ ಬದಿ ಮಗುಚಿ ಬಿದ್ದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.