ವಿಟ್ಲ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಹುತಾತ್ಮ ದಿನದ ಅಂಗವಾಗಿ ಗಾಂಧಿಯನ್ನು ಕೊಂದ ಆರ್ ಎಸ್ ಎಸ್..?? ಎಂಬ ಘೋಷವಾಕ್ಯದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ವಿಟ್ಲದಲ್ಲಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಿಟ್ಲದ ಹಳೆ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.